ಧಾರವಾಡ ಪೋಲಿಸ್ ಅಧೀಕ್ಷಕರ ಕಛೇರಿ

ಧಾರವಾಡ ಪೋಲಿಸ್ ಅಧೀಕ್ಷಕರ ಕಛೇರಿ

Monday, September 24, 2018

CRIME INCIDENTS


ಧಾರವಾಡ ಜಿಲ್ಲೆಯಲ್ಲಿ ದಿನಾಂಕ:24-09-2018 ರಂದು ವರದಿಯಾದ ಪ್ರಕರಣಗಳು

1. ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ:ಅಣ್ನಿಗೇರಿ ಗ್ರಾಮದ ಹತ್ತಿರ ಆರೋಪಿತನಾದ ನಾಗರಾಜ ನಾಗರಾಳ ಇತನು ಚಲಾಯಿಸುತ್ತಿದ್ದ ಹುಂಡೈ ಐ20 ಕಾರ ನಂಬರ ಕೆಎ-26/ಎಮ್-9690 ನೇದ್ದನ್ನು ಗದಗ ಕಡೆಯಿಂದ ಹುಬ್ಬಳ್ಳಿ ಕಡೆಗೆ ಅತೀ ಜೋರಿನಿಂದ ಮತ್ತು ಅಲಕ್ಷತನದಿಂದ ನಡೆಸಿಕೊಂಡು ಬಂದು ಕಾರಿನ ವೇಗದ ನಿಯಂತ್ರಣ ಮಾಡಲಾಗದೇ ಒಮ್ಮಿಂದೊಮ್ಮಲೇ ಬ್ರೆ ಹಾಕಿ ಕಾರನ್ನು ಪಲ್ಟಿ ಮಾಡಿ ಅಪಘಾತ ಪಡಿಸಿ ಕಾರನ್ನು ಜಖಂಗೊಳಿಸಿದ್ದು ಇರುತ್ತದೆ ಈ ಕುರಿತು ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಗುನ್ನಾನಂ 97/2018 ಕಲಂ 279 ನೇದ್ದರಲ್ಲಿ ಪ್ರಕರಣವನ್ನು ದಾಖಲಿಸಿದ್ದು ಇರುತ್ತದೆ.