ಧಾರವಾಡ ಪೋಲಿಸ್ ಅಧೀಕ್ಷಕರ ಕಛೇರಿ

ಧಾರವಾಡ ಪೋಲಿಸ್ ಅಧೀಕ್ಷಕರ ಕಛೇರಿ

Friday, August 11, 2017

CRIME INCIDENTS 11-08-2017


ಧಾರವಾಡ ಜಿಲ್ಲೆಯಲ್ಲಿ ದಿನಾಂಕ 10/08/2017 ರಂದು ವರದಿಯಾದ ಪ್ರಕರಣಗಳು

1. ಕುಂದಗೋಳ ಪೊಲೀಸ್ ಠಾಣಾ ವ್ಯಾಪ್ತಿಯ: ಬಸಾಪೂರ ಗ್ರಾಮದ ಮೃತ ಶಿವಪ್ಪ ಚನ್ನಪ್ಪ ಹೊಸಳ್ಳಿ. ವಯಾ: 55 ವರ್ಷ, ಸಾ: ಬಸಾಪೂರ, ತಾ: ಕುಂದಗೋಳ ಇವನು ಸರಾಯಿ ಕುಡಿಯುವ ಚಟಕ್ಕೆ ಅಂಟಿಕೊಂಡಿದ್ದು ಅವನಿಗೆ ಮನೆಯ ಜನರು ಸರಾಯಿ ಕುಡಿಯಬೇಡ ಅಂತಾ ಬುದ್ದಿವಾದ ಹೇಳಿದ್ದಕ್ಕೆ ಅದನ್ನೆ ಮನಸ್ಸಿಗೆ ಹಚ್ಚಿಕೊಂಡು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಹೇನಿನ ಪುಡಿಯನ್ನು ಸರಾಯಿಯಲ್ಲಿ ಮಿಶ್ರಣ ಮಾಡಿಕೊಂಡು ಕುಡಿದು ಅಸ್ವಸ್ಥನಾಗಿದ್ದು ಅವನಿಗೆ 108 ಅಂಬುಲೇನ್ಸದಲ್ಲಿ ಹಾಕಿಕೊಂಡು ಉಪಚಾರ ಕುಂದಗೋಳ ಸರಕಾರಿ ದವಾಖಾನೆಗೆ ಕರೆದುಕೊಂಡು ಹೋಗುವಾಗ ದೇವನೂರ ಕ್ರಾಸ ಹತ್ತಿರ ಮರಣಹೊಂದಿದ್ದು ಇರುತ್ತದೆ. ಇದರ ಹೊರತಾಗಿ ಅವನ ಮರಣದಲ್ಲಿ ಬೇರೆ ಯಾವ ಸಂಶಯ ಇರುವುದಿಲ್ಲ ಅಂತಾ ಮೃತನ ಶಾಂತವ್ವಾ ಫಿಯಾಱಧಿ ನೀಡಿದ್ದು ಈ ಕುರಿತು ಕುಂದಗೋಳ ಪೊಲೀಸ್ ಠಾಣೆಯಲ್ಲಿ ಯುಡಿನಂ 24/2017 ಕಲಂ 174 ಸಿ.ಆರ್.ಪಿ ಸಿ ನೇದ್ದರಲ್ಲಿ ಪ್ರಕರಣವನ್ನು ದಾಖಲಸಿದ್ದು ಇರುತ್ತದೆ.