ಧಾರವಾಡ ಪೋಲಿಸ್ ಅಧೀಕ್ಷಕರ ಕಛೇರಿ

ಧಾರವಾಡ ಪೋಲಿಸ್ ಅಧೀಕ್ಷಕರ ಕಛೇರಿ

Friday, November 10, 2017

CRIME INCIDENTS 10-11-2017

ಧಾರವಾಡ ಜಿಲ್ಲೆಯಲ್ಲಿ ದಿನಾಂಕ 10-11-2017 ರಂದು ವರದಿಯಾದ ಪ್ರಕರಣಗಳು

1. ಗುಡಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ:ಪಶುಪತಿಹಾಳ ಗ್ರಾಮದ ಗಂಗಮ್ಮ ತಂದೆ ನೀಲಪ್ಪ ಕರೆಮ್ಮನವರ ವಯಾಃ 21 ಸಾಃ ಮಂಟಗಣಿ ತಾಃ ಸವಣೂರ ಇವಳು ದಿನಾಂಕಃ 06/11/2017 ರ ಮಧ್ಯಾಹ್ನ 2-30 ಗಂಟೆಗೆ ತಮ್ಮ ಮನೆಯಿಂದ ಜಾತ್ರೆಗೆ ಅಂತಾ ಹೋದವಳು ಮರಳಿ ಮನೆಗೆ ಬಂದಿರುವುದಿಲ್ಲಾ ಅವಳನ್ನು ಎಲ್ಲ ಕಡೆ ಹುಡುಕಾಡಿದರು ಸಿಕ್ಕಿರುವುದಿಲ್ಲಾ ಈ ಕುರಿತು ಗುಡಗೇರಿ ಪೊಲೀಸ್ ಠಾಣೆಯಲ್ಲಿ ಗುನ್ನಾನಂ 76/2017 ಕಲಂ ಮಹಿಳೆ ಕಾಣೆ ಪ್ರಕರಣವನ್ನು ದಾಖಲಿಸಿದ್ದು ಇರುತ್ತದೆ.

2.ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ: ಪೂನಾ ಬೆಂಗಳೂರ ರಸ್ತೆ ಮೇಲೆ, ಛಬ್ಬಿ ಕ್ರಾಸ್ ಸಮೀಪ ಆರೋಪಿ ಶಹೀದ ತಂದೆ ಬದಲು ಥೋಕೆದಾರ ಸಾ. ಮುಬಾರಿಕಪುರ ತಾ. ರಾಮಗಡ ಜಿ. ಅಲ್ವಾರ ರಾಜ್ಯ. ರಾಜಸ್ಥಾನ ಇತನು ಲಾರಿ ನಂಬರ ಹೆಚ್.ಆರ್-55-ವೈ-0421 ನೇದ್ದನ್ನು ಹುಬ್ಬಳ್ಳಿ ಕಡೆಯಿಂದ ಹಾವೇರಿ ಕಡೆಗೆ ಅತೀ ಜೋರಿನಿಂದ ನಿರ್ಲಕ್ಷತನದಿಂದ ಮಾನವೀಯ ಪ್ರಾಣಕ್ಕೆ ಅಪಾಯವಾಗುವ ರೀತಿಯಲ್ಲಿ ನಡೆಯಿಸಿಕೊಂಡು ಬಂದು ಹುಬ್ಬಳ್ಳಿ ಕಡೆಯಿಂದ ಹಾವೇರಿ ಕಡೆಗೆ ಹೊರಟಿದ್ದ ಕಾರ್ ನಂಬರ ಕೆಎ-27/ಎನ್-2933 ನೇದ್ದಕ್ಕೆ ಬಲಗಡೆ ಡಿಕ್ಕಿ ಮಾಡಿ ಅಪಘಾತಪಡಿಸಿ ಕಾರು ರಸ್ತೆ ಡಿವೈಡರಕ್ಕೆ ಬಡಿದು ಜಖಂಗೊಳ್ಳುವಂತೆ ಮಾಡಿದ್ದು ಇರುತ್ತದೆ ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗುನ್ನಾನಂ 260/2017 ಕಲಂ 279 ನೇದ್ದರಲ್ಲಿ ಪ್ರಕರಣವನ್ನು ದಾಖಲಸಿದ್ದು ಇರುತ್ತದೆ.

3. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ: ಹುಬ್ಬಳ್ಳಿ-ಧಾರವಾಡ  ಬೈಪಾಸ ರಸ್ತೆ ನರೇಂದ್ರ ಗ್ರಾಮದ ಟೋಲ ಹತ್ತಿರ ಲಾರಿ ನಂ MH 20 DE 7359  ನೇದರ ಚಾಲಕನು ತನ್ನ ಲಾರಿಯನ್ನು  ಹುಬ್ಬಳ್ಳಿ ಕಡೆಯಿಂದ ಧಾರವಾಡ ಕಡಗೆ ಅತಿಜೋರಿನಿಂದ ನಿಷ್ಕಾಳಜಿತನದಿಂದ ಮಾನವೀಯ ಪ್ರಾಣಕ್ಕೆ ಅಪಾಯವಾಗುವ ರೀತಿಯಲ್ಲಿ ನಡೆಸಿಕೊಂಡು ಬಂದು ಲಾರಿಯ  ವೇಗ ನಿಯಂತ್ರಣ ಮಾಡಲಾಗದೇ ತನ್ನ ಮುಂದೆ ಅದೇ ಮಾರ್ಗವಾಗಿ ಹೋಗುತ್ತಿದ್ದ ಪಿರ್ಯಾದಿದಾರರ ಟ್ಯಾಂಕರ ಲಾರಿ ನಂ MH 12 NX 9066  ನೇದಕ್ಕೆ ಹಿಂದೆ ಡಿಕ್ಕಿಪಡಿಸಿ ಲಾರಿಗಳನ್ನು ಜಖಂಗೊಳಿಸಿದ್ದು ಇರುತ್ತದೆ.ಈ ಕುರಿತು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗುನ್ನಾನಂ 263/2017 ಕಲಂ 279 ನೇದ್ದರಲ್ಲಿ ಪ್ರಕರಣವನ್ನು ದಾಖಲಿಸಿದ್ದು ಇರುತ್ತದೆ.

4. ಗುಡಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ: ಗುನ್ನಾನಂ 73/2017.74/2017.75/2017 ಮುಂಜಾಗೃತ ಕ್ರಮವಾಗಿ 107 ಸಿ.ಆರ್.ಪಿ ಸಿ ನೇದ್ದರಲ್ಲಿ   ಪ್ರಕರಣವನ್ನು ದಾಖಲಿಸಿದ್ದು ಇರುತ್ತದೆ.

5. ಕುಂದಗೋಳ ಪೊಲೀಸ್ ಠಾಣಾ ವ್ಯಾಪ್ತಿಯ: ಗುನ್ನಾನಂ 170/2017.171/2017.172/2017 ಮುಂಜಾಗೃತ ಕ್ರಮವಾಗಿ 107ಸಿ.ಆರ್.ಪಿ.ಸಿ  ನೇದ್ದರಲ್ಲಿ ಪ್ರಕರಣವನ್ನು ದಾಖಲಿಸಿದ್ದು ಇರುತ್ತದೆ.