ಧಾರವಾಡ ಪೋಲಿಸ್ ಅಧೀಕ್ಷಕರ ಕಛೇರಿ

ಧಾರವಾಡ ಪೋಲಿಸ್ ಅಧೀಕ್ಷಕರ ಕಛೇರಿ

Wednesday, August 1, 2018

CRIME INCIDENTS 01-08-2018


 ಧಾರವಾಡ ಜಿಲ್ಲೆಯಲ್ಲಿ ದಿನಾಂಕ:01-08-2018 ರಂದು ವರದಿಯಾದ ಪ್ರಕರಣಗಳು

1. ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯ: ಕಲಘಟಗಿ ಯಲ್ಲಾಪೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಪೂರ್ತಿ ಕಿಡ್ಸ ಶಾಲೆಯ ಹತ್ತೀರ ಯಾವುದೋ ವಾಹನದ ಚಾಲಕನು ಕಲಘಟಗಿ ಕಡೆಯಿಂದಾ ಯಲ್ಲಾಪೂರ ಕಡೆಗೆ ಅತೀ ಜೋರಿನಿಂದಾ & ನಿಷ್ಕಾಳಜಿತನದಿಂದ ಮಾನವೀಯ ಪ್ರಾಣಕ್ಕೆ ಅಪಾಯವಾಗುವ ರೀತಿಯಲ್ಲಿ ನೆಡೆಸಿಕೊಂಡು ಹೋಗಿ ರಸ್ತೆಯ ಸೈಡಿನಲ್ಲಿ ನೆಡೆದುಕೊಂಡು ಹೊರಟ ಸುಮಾರು 55 ರಿಂದ 60 ವರ್ಷ ವಯಸ್ಸಿನ ಅನಾಮಧೇಯ ಗಂಡಸು ವ್ಯೆಕ್ತಿಗೆ ಡಿಕ್ಕಿ ಮಾಡಿ ಅಪಘಾತಪಡಿಸಿ ಉಪಚಾರಕ್ಕೆ ಅಂತಾ ಕಲಘಟಗಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಉಪಚಾರ ಹೊಂದುವ ಕಾಲಕ್ಕೆ ಉಪಚಾರ ಫಲಿಸದೆ ಮರಣಹೊಂದುವಂತೆ ಮಾಡಿದ್ದಲ್ಲದೆ ಗಾಯಾಳುವಿಗೆ ಉಪಚಾರಕ್ಕೆ ಸಹಕರಿಸದೆ & ಘಟನೆಯ ವಿಷಯವನ್ನು ಪೊಲೀಸ ಠಾಣೆಗೆ ತಿಳಿಸದೆ ವಾಹನ ಸಮೇತ ಪರಾರಿಯಾಗಿದ್ದು ಇರುತ್ತದೆ ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಗುನ್ನಾನಂ 203/2018 ಕಲಂ 279.304(ಎ) ವಾಹನ ಕಾಯ್ದೆ ನೇದ್ದರಲ್ಲಿ ಪ್ರಕರಣವನ್ನು ದಾಖಲಿಸಿದ್ದು  ಇರುತ್ತದೆ.